LatestUncategorized

*ಭಾರಿ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ.

Home add -Advt

ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರಿನಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

https://pragati.taskdun.com/amith-shahjagadish-shettarlakshmana-savadi/

Related Articles

Back to top button