Latest

*ಚಂಡಮಾರುತ ಎಚ್ಚರಿಕೆ; ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.

Home add -Advt

ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರ ಮೇಲ್ಮೈ ಸುಳಿಗಾಳಿ ಚಂದಮಾರುತ ರೂಪ ಪಡೆದುಕೊಲ್ಳಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಮಳೆಯಾಗಲಿದೆ.

ಕುಣಿಗಲ್, ಸರಗೂರು, ಕೋಣನೂರು, ಮದ್ದೂರು, ಚಿಕ್ಕನಾಯಕನಹಳ್ಳಿ, ಸಿರಾ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/beltangadihusband-illigal-releshnshipwife-suicide/


Related Articles

Back to top button