Latest

*ಪ್ರಧಾನಿ ಮೋದಿ ವ್ಯಂಗ್ಯದ ಮಾತಿಗೆ ಟಾಂಗ್ ನೀಡಿದ ಡಿಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹತಾಶರಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅವರು ಆತಂಕ ಪಡುವುದು ಬೇಡ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ಯೋಜನೆ ಜಾರಿಗೆ ತರುತ್ತೇವೆ ಎಂದು ಹೇಳಿದರು.

ಹತಾಶರಾಗಿ ಪ್ರಧಾನಿ ಮೋದಿ, ಅಮಿತ್ ಶಾ ಹೇಳಿಕೆ ಕೊಡುತ್ತಿದ್ದಾರೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಅವರು ಆತಂಕ ಪಡುವುದು ಬೇಡ, ನಮ್ಮ ಸರ್ಕಾರ ಬಂದ ತಕ್ಷಣ ಗ್ಯಾರಂಟಿ ಯೋಜನೆ ಈಡೇರಿಸುತ್ತೇವೆ. ಇಲ್ಲದೇ ಹೋದರೆ ನಾವು ಮುಂದೆ ವೋಟ್ ಕೇಳೋದಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

https://pragati.taskdun.com/pm-narendramodibjpsamvadacongress/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button