LatestUncategorized

*ಕಾಲೇಜಿನಲ್ಲಿಯೇ ವಿದ್ಯಾರ್ಥಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾರ್ಥಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಗುಜರಾತ್ ಮೂಲದ ಭಾಸ್ಕರ ಜೆಟ್ಟಿ (22) ಮೃತ ವಿದ್ಯಾರ್ಥಿ. ಮೆಕಾನಿಕಲ್ ಇಂಜಿನಿಯರ್ ಆಗಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿ ಫೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ವಿದ್ಯಾರ್ಥಿಯನ್ನೇ ಹತ್ಯೆ ಮಾಡಲಾಗಿದೆ.

Home add -Advt

ವಿದ್ಯಾರ್ಥಿ ಭಾಸ್ಕರ್ ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದೆ. ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಗಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://pragati.taskdun.com/b-v-shrinivasanticipatory-bail-pleadismissyouth-congress-president/

Related Articles

Back to top button