ಪ್ರಗತಿವಾಹಿನಿ ಸುದ್ದಿ; ವಿಜಯನಗರ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಸಿಲ ಝಳವನ್ನೂ ಲೆಕ್ಕಿಸದೇ ರಾಜಕೀಯ ಪಕ್ಷಗಳ ಮುಖಂಡರು ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಏಕಾಏಕಿ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ನಡೆದಿದೆ.
ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ.ಶ್ರೀನಿವಾಸ್ ಪರ ಪ್ರಚಾರಕ್ಕಾಗಿ ಸಿದ್ದರಾಯ್ಯ ತೆರಳಿದ್ದು, ಕೂಡ್ಲಗಿ ಹೆಲಿ ಪ್ಯಾಡ್ ಗೆ ಆಗಮಿಸಿದ ಸಿದ್ದರಾಮಯ್ಯ ಜನರತ್ತ ಕೈ ಬೀಸುತ್ತ ಕಾರಿನತ್ತ ಸಾಗಿದ್ದಾರೆ. ಕಾರಿನ ಡೋರ್ ಮೇಲೆ ನಿಂತು ಕೆಲ ಕಾಲ ಜನರತ್ತ ಕೈಬೀಸಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯನವರನ್ನು ಹಿಡುದುಕೊಂಡಿದ್ದಾರೆ. ಸಾವರಿಸಿಕೊಂಡು ಸಿದ್ದರಾಮಯ್ಯನವರು ಕಾರಿನಲ್ಲಿ ಕುಳಿತುಕೊಂಡಿದ್ದಾರೆ. ಸ್ಥಳದಲ್ಲಿದ್ದ ವೈದ್ಯರು ಅವರಿಗೆ ಗ್ಲೂಕೋಸ್ ನೀಡಿದ್ದಾರೆ ಎನ್ನಲಾಗಿದೆ.
ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಕೂಡ್ಲಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಆದರೆ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಕೂಡ್ಲಗಿ ಅಭ್ಯರ್ಥಿ ಶ್ರೀನಿವಾಸ್, ಇದನ್ನು ನಿರಾಕರಿಸಿದ್ದರೆ. ಸಿದ್ದರಾಮಯ್ಯನವರು ಕುಸಿದು ಬಿದ್ದಿಲ್ಲ, ಆರೋಗ್ಯದಿಂದಲೇ ಇದ್ದಾರೆ. ಯಾವುದೇ ಸಮಸ್ಯೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ