Karnataka NewsLatest
ರಾಜ್ಯ ರಾಜಕೀಯ ಇನ್ನಷ್ಟು ಕುತೂಹಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ರಾಜ್ಯ ರಾಜಕೀಯ ಶುಕ್ರವಾರ ಇನ್ನಷ್ಟು ತಿರುವು ಪಡೆಯುತ್ತಿದ್ದು, ಭಾರೀ ಕುತೂಹಲ ಮೂಡಿಸಿದೆ.
ಅತೃಪ್ತ ಶಾಸಕರ ಕುರಿತು ಮಂಗಳವಾರ ತೀರ್ಪು ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಸದನದಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ನಾವು ವಾಪಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಮುಂಬೈನಲ್ಲಿರುವ ಶಾಸಕರು ಹೇಳಿದ್ದಾರೆ.
ಈ ಮಧ್ಯೆ, ಬಿಜೆಪಿ ಶಾಸಕರನ್ನು ಸೆಳೆಯಲು ಜೆಡಿಎಸ್ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಶಾಸಕರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.
ಮಂಗಳವಾರದವರೆಗೂ ಕುತೂಹಲ ಮುಂದುವರಿಯಲಿದ್ದು, ಸೋಮವಾರವೂ ಅಧಿವೇಶನ ನಡೆಯಲಿದೆ.




