ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಜರಂಗದಳ ಬ್ಯಾನ್ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನೇ ಬೆಂಕಿ ಹಚ್ಚಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಕಲಬುರ್ಗಿಯಲ್ಲಿ ಬಿಜೆಪಿ ನಾಯಕರ ಪ್ರಚಾರ ಸಭೆಯಲ್ಲಿ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದ್ದಾರೆ. ರಾವಣ ಆಂಜನೇಯನ ಬಾಲಕ್ಕೆ ಬೆಂಕಿಯಿಟ್ಟ ಇದರಿಂದ ಇಡೀ ಲಂಯೇ ನಾಶವಾಯಿತು. ಹಾಗೇ ಕಾಂಗ್ರೆಸ್ ಬಜರಂಗದಳವನ್ನು ಮುಟ್ಟಿದ್ದರಿಂದ ಕಾಂಗ್ರೆಸ್ ಸಂಪೂರ್ಣವಾಗಿ ಅಧಿಕಾರ ಕಳೆದುಕೊಳ್ಳಲಿದೆ. ವಿಪಕ್ಷ ಸ್ಥಾನದಲ್ಲಿ ಮುಂದುವರಿಯಲೂ ಸಾಧ್ಯವಾಗದಷ್ಟು ಕಡುಇಮೆ ಸ್ಥಾನಕ್ಕೆ ಕುಸಿಯಲಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನವರು ತಕ್ಷಣ ಪ್ರಣಾಳಿಕೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ ಐ ಮೇಲಿದ್ದ 173 ಪ್ರಕರಣ ಹಿಂಪಡೆಯಿತು. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್ ಬೆಂಬಲ ನೀಡಿದೆ. ದೇಶದಲ್ಲಿ ಪಿಎಫ್ ಐ ಬ್ಯಾನ್ ಆಗಿದೆ ಎನ್ನುವುದೂ ಕಾಂಗ್ರೆಸ್ ಗೆ ಗೊತ್ತಿಲ್ಲ. ಈಗ ಪಿಎಫ್ ಐ ಜೊತೆ ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿದೆ. ಮೊದಲು ಬಜರಂಗದಳ ಬ್ಯಾನ್ ಅಂಶ ಹಿಂಪಡೆಯಲಿ ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ