*BJP ದೇವರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ; ಕಾಂಗ್ರೆಸ್ ನಿಂದ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಮಂಡಳಿ ಸ್ಥಾಪನೆ; ಪ್ರತ್ಯೇಕ ಕಾರ್ಯಕ್ರಮ ಘೋಷಿಸಿದ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಅಂಶ ಪ್ರಸ್ತಾಪಿಸಿರುವುದಕ್ಕೆ ರಾಜ್ಯ ಬಿಜೆಪಿ ಕೆಂಡ ಕಾರಿದ್ದು, ಕಾಂಗ್ರೆಸ್ ವಿರುದ್ಧ ಅಭಿಯಾನ, ಹನುಮಾನ್ ಚಾಲಿಸಾ ಪಠಣ ಆರಂಭಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿ ಬಿಜೆಪಿ ಗಾಬರಿಯಾಗಿದೆ. ಹಾಗಾಗಿ ದೇವರ ಹೆಸರನ್ನೂ ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟಾಂಗ್ ನೀಡಿದ್ದಾರೆ.
ಮೈಸೂರಿನ ಚಾಮುಡಿ ಬೆಟ್ಟದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವೂ ಕೂಡ ಆಂಜನೇಯನ ಭಕ್ತರೆ. ನಾವೂ ಕುಂಕುಮ, ನಾಮ ಹಚ್ಚುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಮಂಡಳಿ ಸ್ಥಾಪಿಸಲಗುತ್ತದೆ. ಯುವಕರಲ್ಲಿ ಆಂಜನೇಯನ ಸಿದ್ಧಾಗಳ ಬಗ್ಗೆ ಅರಿವು ಮೂಡಿಸಲು ಪ್ರತ್ಯೇಕ ಕಾರ್ಯಕ್ರಮಗಳನ್ನು ಮಾಡುತ್ತೇವೆ. ಪ್ರತಿ ತಾಲುಕಿನಲ್ಲಿಯೂ ಈ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.
ಆಂಜನೇಯ ಬೇರೆ, ಬಜರಂಗದಳ ಸಂಘಟನೆ ಬೇರೆ. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಬಜರಂಗದಳ ನೈತಿಕ ಪೊಲೀಸ್ ಗಿರಿ ಮಾಡುತ್ತಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ. ಬಿಜೆಪಿಯವರು ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಹನುಮನ ಹೆಸರಿಟ್ಟುಕೊಂಡವರೆಲ್ಲ ಆಂಜನೇಯರಾಗಲ್ಲ. ಅನಗತ್ಯವಾಗಿ ಬಿಜೆಪಿ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ