ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ ಸರ್ಪ ಎಂದಿದ್ದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮೋದಿ ನಾಲಾಯಕ್ ಎಂದು ಬೈದಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ ಕಾರಿರುವ ಕೆ.ಎಸ್.ಈಶ್ವರಪ್ಪ, ಆನೆ ಹಾಗೂ ತಿಗಣೆಯ ಹೋಲಿಕೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಈಶ್ವರಪ್ಪ, ಪ್ರಧಾನಿ ಮೋದಿಯವರನ್ನು ವಿಷಸರ್ಪಕ್ಕೆ ಹೋಲಿಸಿದಾಗ ಮಲ್ಲಿಕಾರ್ಜುನ ಖರ್ಗೆ ಅವರ ಜೀವನ ಸಾಧನೆ ಮಣ್ಣುಪಾಲಾಯ್ತು. ಇನ್ನು ಪುತ್ರ ಪ್ರಿಯಾಂಕ್ ಖರ್ಗೆ ಕೂಡಾ ಪ್ರಧಾನಿ ಮೋದಿಯವರನ್ನು ಬೈದಿದ್ದಾರೆ. ಇದು ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡಿದ ಹಾಗೆ ಎಂದು ಟಾಂಗ್ ನೀಡಿದ್ದಾರೆ.
ಆನೆಯಂತೆ ರಾಜಗಾಂಭೀರ್ಯದಿಂದ ಬರುವ ಪ್ರಧಾನಿ ಮೋದಿಯವರೆಲ್ಲಿ, ತಿಗಣೆ ರೀತಿ ಇರುವ ಪ್ರಿಯಾಂಕ ಖರ್ಗೆ ಎಲ್ಲಿ ಎಂದು ವಾಗ್ದಾಳಿ ನದೆಸಿದರು.
ಇನ್ನು ಮುಸ್ಲಿಂರನ್ನು ತೃಪ್ತಿ ಪಡಿಸುವುದು ಕಾಂಗ್ರೆಸ್ ಕೆಲಸ. ಬಜರಂಗದಳ ನಿಷೇಧ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ನವರಲ್ಲೇ ಗೊಂದಲ ಇದೆ. ಭಾರತೀಯ ಸಂಸ್ಕೃತಿ ರಕ್ಷಣೆಗಿರುವ ಸಂಘಟನೆ ಬಜರಂಗದಳ. ಇಂತಹ ಸಂಘಟನೆಯನ್ನು ಪಿಎಫ್ ಐ ಗೆ ಹೋಲಿಸಿದ್ದು ದೊಡ್ಡ ದುರಂತ. ಹಿಂದೂಗಳನ್ನು ಪಕ್ಕಕ್ಕೆ ಸರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ