ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು, ಈ ಮಧ್ಯೆ ಜೆಡಿಎಸ್ ಅಭ್ಯರ್ಥಿ ಮುನೇಗೌಡ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡ ವೈರಲ್ ಆಗಿದೆ. ಬಿಜಾಪುರ ಮೂಲದ ಉದ್ಯಮಿಗೆ ಜೆಡಿಎಸ್ ಅಭ್ಯರ್ಥಿ ದಮ್ಕಿ ಹಾಕಿದ್ದಾರೆ ಎನ್ನಲಾದ ಆಡಿಯ್ ವೈರಲ್ ಆಗಿದ್ದು, ಅಶ್ಲೀಲ ಪದಗಳಿಂದಲೂ ಬಿದಿದ್ದಾರೆ ಎನ್ನಲಾಗಿದೆ.
69 ಲಕ್ಷ ಹಣ ನೀಡದೇ ಮೋಸ ಮಾಡಿ ಉದ್ಯಮಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೊಪ ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ