ಗಂಟೆಗೆ 40-50 ಕೀ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೋಮಾ ಚಂಡಮಾರುತದ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಚಾ ಚಂಡಮಾರುತ ನಿಧಾನವಾಗಿ ರೂಪುಗೊಳ್ಳುತ್ತಿದ್ದು, ಮೇ 8 ರಂದು ಚಂಡಮಾರುತ ಆರಂಭವಾಗಲಿದ್ದು, ಮೇ 9ರಂದು ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ.
ಭಾನುವಾರದ ಬಳಿಕ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಒಂದೆರಡುಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಮೇ 12ವರೆಗೆ ಬೀದರ್, ಹುಮ್ನಾಬಾದ್, ಕೋತಾರ, ತುಮಕೂರು ಯಲಬುರ್ಗಾ, ಶ್ರೀರಂಗಪಟ್ಟಣದಲ್ಲಿ ಭಾರಿ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ