ಪ್ರಗತಿವಾಹಿನಿ ಸುದ್ದಿ; ರಾಯಚೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಪರಸ್ಪರ ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವೆ, ಕಾಂಗ್ರೆಸ್ ನಾಯಕಿ ಉಮಾಶ್ರೀ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರಾಯಚೂರಿನ ಮಸ್ಕಿಯಲ್ಲಿ ಏ.28ರಂದು ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ್ದ ಉಮಾಶ್ರೀ, ಬಿಜೆಪಿಯವರು ವಿಷಜಂತುಗಳು ಎಂದು ಬೈದಿದ್ದರು. ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ, ಧರ್ಮಗಳನ್ನು ಒಡೆದು ಕೋಮುವಾದ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದ್ದರು.
ಇದೇ ವಿಚಾರವಾಗಿ ಈಗ ಮಾಸ್ಕಿ ಪೊಲೀಸ್ ಠಾಣೆಯಲ್ಲಿ ಉಮಾಶ್ರೀ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ