Kannada NewsKarnataka News

SSLC ಸಾಧನೆ: DDPI ಅಭಿನಂದನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿರು ಸವದತ್ತಿಯ ಅನುಪಮಾ ಶ್ರೀಶೈಲ ಹಿರೇ ಹೊಳಿ ಹಾಗೂ ಸಾಧನೆಗೈದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅಭಿನಂದಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2023 ರ ಎಸ್. ಎಸ್ ಎಲ್ ಸಿ . ಪರಿಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ  ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.  ಸೌದತ್ತಿ ತಾಲೂಕು  ಕುಮಾರೇಶ್ವರ ಶಾಲೆಯ ವಿದ್ಯಾರ್ಥಿನಿ  ಕುಮಾರಿ ಅನುಪಮಾ ಶ್ರೀಶೈಲ ಹಿರೇಹೊಳಿ 625/625 ಅಂಕ ಪಡೆದು ಬೆಳಗಾವಿ ಜಿಲ್ಲೆಗೆ ಹೆಮ್ಮೆ ತಂದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಣ  ಇಲಾಖೆ ವತಿಯಿಂದ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Home add -Advt

ಇದೇ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ಫಲಿತಾಂಶದ ವಿವರವನ್ನೂ ಅವರು ನೀಡಿದ್ದಾರೆ. ಫಲಿತಾಂಶದಲ್ಲಿ ರಾಮದುರ್ಗ ಶೇ.92.95 ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ.

https://pragati.taskdun.com/sslc-result4-students1st-rank/

Related Articles

Back to top button