ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ತತ್ತರಿಸಿದ ಜನ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಳೆ ಅವಾಂತರದಿಂದಾಗಿ ತಗ್ಗು ಪ್ರದೇಶಗಳು, ಹಲವು ರಸ್ತೆಗಲು ಜಾವೃತಗೊಂಡಿದ್ದು, ನದಿಯಂತಾಗಿವೆ.
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲಿಯೂ ನಾಲ್ಕು ದಿನಗಳ ಕಾಲ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ನಾಳೆ ಹಾಗೂ ನಾಡಿದ್ದು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ಮೇ 10ರಂದು ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 11ರಂದು ದಕ್ಷಿಣ ಒಳನಾಡಿನಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ