Latest

*ಮತದಾನೋತ್ತರ ಸಮೀಕ್ಷೆ ಬಗ್ಗೆ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದ ಜನರು ಹೊಸತನವನ್ನು ಬಯಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮತದಾನೋತ್ತರ ಸಮೀಕ್ಷೆ ಪ್ರಕಟವಾದ ಬಳಿಕ ಬೆಂಗಳೂರಿನಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಡಬಲ್ ಇಂಜಿನ್ ಸರ್ಕಾರ ಫೇಲ್ ಆಗಿದೆ. ಭ್ರಷ್ಟ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಕಳಂಕ ಬಂದಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಹೊಸ ಕರ್ನಾಟಕಕ್ಕೆ ಹೊಸ ಸರ್ಕಾರ ಬರಲಿದೆ ಎಂದರು.

ನಾವು ಗೆಲ್ಲುತ್ತೇವೆ. ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

https://pragati.taskdun.com/karnataka-election-resultexit-polltv9-kannadac-voter/


Home add -Advt

Related Articles

Back to top button