Latest

*ಸಮೀಕ್ಷೆಯನ್ನು ಸುಳ್ಳು ಮಾಡುವ ಕೆಲಸ ನಮ್ಮವರು ಮಾಡ್ತಾರೆ ಎಂದ ಶೋಭಾ ಕರಂದ್ಲಾಜೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತಗಟ್ಟೆ ಸಮೀಕ್ಷೆಯನ್ನು ಜನರು ಸುಳ್ಳು ಮಾಡ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಮತದಾನೋತ್ತರ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆಲುವು, ಎರಡು ಸಮಿಕ್ಷೆಯಲ್ಲಿ ಮತ್ರ ಬಿಜೆಪಿ ಮೇಲುಗೈ ಎಂಬ ವರದಿ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆಯನ್ನು ಜನರು ಹಾಗೂ ನಮ್ಮ ಕಾರ್ಯಕರ್ತರು ಸುಳ್ಳು ಮಾಡಲಿದ್ದಾರೆ ಎಂದು ಹೇಳಿದರು.

Home add -Advt

120-125 ಸ್ಥಾನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಮೀಕ್ಷೆಯನ್ನು ಸುಳ್ಳು ಮಾಡುವ ಕೆಲಸ ನಮ್ಮವರು ಮಾಡಲಿದ್ದಾರೆ. ಈ ಬಾರಿ ಬಿಜೆಪಿ ಬಹುಮತಗಳಿಂದ ಅಧಿಕಾರಕ್ಕೆ ಬಂದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

https://pragati.taskdun.com/bjp-workerramu-rathoddead-body-foundkalaburgi/


Related Articles

Back to top button