ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ರಾಜಕೀಯದ ಬದಲಾದ ಪರಿಸ್ಥಿತಿಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಘಟಾನುಘಟಿ ಸಚಿವರು ಸೋಲನುಭವಿಸಿರುವುದು ಅಚ್ಚರಿ ತಂದಿದೆ.
ಚಾಮರಾಜನಗರದಲ್ಲಿ ವಸತಿ ಸಚಿವ ವಿ.ಸೋಮಣ್ಣ, ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸೋಲನುಭವಿಸಿದ್ದಾರೆ.
ಇನ್ನು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಗೆಲುವು ಸಾಧಿಸಿದ್ದು, ಸುಮಾರು 20 ಸಾವಿರ ಮತಗಳ ಅಂತರದಿಂದ ಸಚಿವ ಶ್ರೀರಾಮುಲು ಪರಾಭವಗೊಂಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ ಸೋಲನುಭವಿಸಿದ್ದಾರೆ. ಕನಕಪುರದಲ್ಲಿ ಆರ್ ಅಶೋಕ ಸೋಲನುಭವಿಸಿದ್ದಾರೆ.
ಸೋಲನುಭವಿಸಿದ ಸಚಿವರು:
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಡಾ.ಕೆ.ಸುಧಾಕರ್ ಸೋಲನುಭವಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಬಿ.ಶ್ರೀರಾಮುಲು
ಕೆ.ಆರ್.ಪೇಟೆಯಲ್ಲಿ ಸಚಿವ ನಾರಾಯಣಗೌಡ
ಮುಧೋಳದಲ್ಲಿ ಸಚಿವ ಗೋವಿಂದ ಕಾರಜೋಳ
ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಚಿವ ವಿ.ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿಯೂ ಸೋಲು
ಚಿಕ್ಕನಾಯಕನಹಳ್ಳಿಯಲ್ಲಿ ಜೆ.ಮಾಧುಸ್ವಾಮಿ ಸೋಲು
ಹೊಸಕೋಟೆಯಲ್ಲಿ ಸಚಿವ ಎಂಬಿ ಪಾಟೀಲ್ ಸೋಲು
ಯಲಬುರ್ಗಾದಲ್ಲಿ ಸಚಿವ ಹಾಲಪ್ಪ ಆಚಾರ್ ಸೋಲನುಭವಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದ ಘಟಾನುಘಟಿ ನಾಯಕರು ಈ ಬಾರಿಯ ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ