
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿರುವ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಹುಟ್ಟುಹಬ್ಬದ ಶುಭಾಷಯ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಸಂಭ್ರಮದ ನಡುವೆಯೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ರಾಜಕೀಯ ನಾಯಕರು, ಅಭಿಮಾನಿಗಳು, ಕಾರ್ಯಕರ್ತರು ಶುಭಾಷಯ ಕೋರಿದ್ದಾರೆ.
ಇದೇ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಕೋರಿದ್ದಾರೆ ಎಂದು ತಿಳಿದುಬಂದಿದೆ.