ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೊನೇ ಕ್ಷಣದಲ್ಲಿ ರದ್ದಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈಕಮಾಂಡ್ ನಡೆಸುತ್ತಿರುವ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಬೇಕಿತ್ತು. ಆದರೆ ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸವನ್ನು ಡಿ.ಕೆ.ಶಿವಕುಮಾರ್ ರದ್ದುಗೊಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿಯೇ ವೈದ್ಯರು ಡಿ.ಕೆ.ಶಿವಕುಮಾರ್ ಅವರಿಗೆ ಚಿಕಿತ್ಸೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಆರೋಗ್ಯ ಸಮಸ್ಯೆ ವಿಚಾರವಾಗಿ ಮಾಹಿತಿ ನೀಡಿರುವ ವೈದ್ಯ ಡಾ.ಶಂಕರ್ ಗುಹಾ, ಡಿ.ಕೆ.ಶಿವಕುಮಾರ್ ಅವರಿಗೆ ಬಿಪಿ ಸೇರಿದಂತೆ ಕೆಲ ತಪಾಸಣೆ ನಡೆಸಲಾಗಿದ್ದು, ಬೇಸಿಕ್ ಮೆಡಿಸಿನ್ ನೀಡಲಾಗಿದೆ. ಹೊಟ್ಟೆಯಲ್ಲಿ ಇನ್ಫೆಕ್ಷನ್ ನಿಂದ ಲೂಸ್ ಮೋಷನ್ ರೀತಿ ಆಗಿದೆ. ಹಾಗಾಗಿ ಸದ್ಯಕ್ಕೆ ಪ್ರಯಾಣ ಬೇಡ, ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಬಂದಾಗಿನಿಂದ ನಿರಂತರವಾಗಿ ಓಡಾಟ ನಡೆಸಿದ್ದಾರೆ. ಹಾಗಾಗಿ ಮೂರುಗಂಟೆ ವಿಶ್ರಾಂತಿ ಪಡೆಯುವಂತೆ ಹೇಳಿದ್ದೇವೆ. ಟ್ರಾವೆಲ್ ಎಷ್ಟು ಮುಖ್ಯವೋ ಅವರ ಆರೋಗ್ಯ ಕೂಡ ಅಷ್ಟೇ ಮುಖ್ಯ. ನಾಳೆ ಮುಂಜಾನೆ ಕೂಡ ಬಂದು ತಪಾಸಣೆ ನಡೆಸಲಾಗುತ್ತದೆ. ಸಧ್ಯಕ್ಕೆ ಮೂರು ಗಂಟೆ ವಿಶ್ರಾಂತಿ ಪಡೆಯಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ