Latest

*ಉತ್ತರ ಕರ್ನಾಟಕದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಿ; ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿಯೂ ಲಾಭಿ ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದವರನ್ನು ಡಿಸಿಎಂ ಮಾಡಲಿ ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಸ್ವಾಮೀಜಿ, ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಮುಂದಿನ 5 ವರ್ಷ ಉತ್ತಮ ಆಡಳಿತ ನೀಡಲಿ. ಕ್ರೀಯಾಶೀಲ ವ್ಯಕ್ತಿ ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಬೇಕು. ನಾವು ಯಾವುದೇ ಜಾತಿ ಆಧಾರದ ಮೇಲೆ ಸ್ಥಾನಮಾನ ಕೇಳುತ್ತಿಲ್ಲ. ಅರ್ಹತೆಯ ಆಧಾರದ ಮೇಲೆ ಕೇಳುತ್ತಿದ್ದೇವೆ ಎಂದಿದ್ದಾರೆ.

ಹಾಗೇಯೇ ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಈ ಭಾಗದ ಜನರ ಕೊಡುಗೆ ಇದೆ ಎಂದು ಹೇಳಿದರು.

https://pragati.taskdun.com/mocha-cyclonemyanmar81-people-death/


Home add -Advt

Related Articles

Back to top button