ಪ್ರಗತಿವಾಹಿನಿ ಸುದ್ದಿ ಬೆಂಗಳೂರು: 2019ರಲ್ಲಿ ತಾವು ಕಾಂಗ್ರೆಸ್ ತೊರೆಯಲು ಸಿದ್ದರಾಮಯ್ಯ ಕಾರಣ ಎಂದು ರಾಜ್ಯದ ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ ಹೇಳಿದ್ದಾರೆ.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಸುಧಾಕರ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
“2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.” ಎಂದು ಸುಧಾಕರ ಹೇಳಿಕೊಂಡಿದ್ದಾರೆ.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿನವೂ ಕುಮಾರಸ್ವಾಮಿ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರಿಗೆ ಸಿದ್ದರಾಮಯ್ಯ ಹೇಳುತ್ತಿದ್ದರು ಎಂದು ಡಾ. ಸುಧಾಕರ್ ಅಂದಿನ ರಾಜಕೀಯದ ಒಳಮರ್ಮ ಹೊರಗೆಡವಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ