Latest

*ಕಟಿಲು ದೇವಸ್ಥಾನದ ಬಳಿ ಹೊತ್ತಿ ಉರಿದ ಬಸ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಒಂಎಂಪಿಎಲ್ ಸಂಸ್ಥೆಗೆ ಸೇರಿದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಕಟಿಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Home add -Advt

ಮಂಗಳೂರು-ಕಟೀಲು ಮಾರ್ಗವಾಗಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುತ್ತಿದ್ದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಯತ್ನಿಸಲಾಯಿತಾದರೂ ಸಾಧ್ಯವಾಗಿಲ್ಲ. ಬಸ್ ನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಅದೃಷ್ಟವಶಾತ್ ಅಪಾಯವಿಲ್ಲದೇ ಬಚಾವ್ ಆಗಿದ್ದಾರೆ.

https://pragati.taskdun.com/d-k-shivakumarmallikarjuna-khargemeetreaction/


Related Articles

Back to top button