ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ?; ಅಧಿಕೃತ ಘೋಷಣೆ ಬಾಕಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ತಡರಾತ್ರಿ ನವದೆಹಲಿಯಲ್ಲಿ ನಡೆದ ಸಂದಾನ ಸಭೆಯಲ್ಲಿ ಈ ಕುರಿತು ಒಪ್ಪಂದಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎರಡೂವರೆ ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ.ಶಿವಕುಮಾರ ಉಪಮುಖ್ಯಮಂತ್ರಿಯಾಗಲಿದ್ದಾರೆ. ನಂತರದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗಲಿದ್ದಾರೆ. ಈ ಕುರಿತ ಸಂದಾನಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ಬಂದಿದ್ದು, ಅಧಿಕೃತವಾಗಿ ಇನ್ನೂ ಪ್ರಕಟಿಸಲಾಗಿಲ್ಲ.

ಮಾಹಿತಿ ಪ್ರಕಾರ ಶನಿವಾರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

https://pragati.taskdun.com/d-k-shivakumarsiddharamaiahcm-post/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button