Latest

*ನನಗೆ ಡಿಸಿಎಂ ಸ್ಥಾನ ಕೊಡಬೇಕು ಎಂದ ಡಾ.ಜಿ.ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರ ಹಂಚಿಕೆ ಸೂತ್ರದ ಮೂಲಕ ಸಿಎಂ ಆಯ್ಕೆ ಹಗ್ಗಜಗ್ಗಾಟ ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಈ ನಡುವೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಒಬ್ಬರು ಮಾತ್ರ ಅಧಿಕಾರಲ್ಲಿರಬೇಕು ಎಂಬುದು ಸೂಕ್ತವಲ್ಲ, ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು ನೇರವಾಗಿ ಹೇಳಿಕೆ ಕೊಟ್ಟಿದ್ದಾರೆ.

Home add -Advt

ಎಲ್ಲರ ನಾಯಕತ್ವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಎಲ್ಲಾ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಹುದ್ದೆ ನೀಡಲಿ. ನಾನೂ ಕೂಡ ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದವನು. ನನ್ನನ್ನು ಈ ಬಾರಿ ಡಿಸಿಎಂ ಮಾಡಬೇಕು ಎಂದಿದ್ದಾರೆ.

https://pragati.taskdun.com/siddaramaiahcmd-k-shivakumar-dcmk-c-venugopalpressmeet/


Related Articles

Back to top button