*ಬೆಳಗಾವಿಯಲ್ಲಿ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿ; ದೀಪಕ ಗುಡಗನಟ್ಟಿ ಒತ್ತಾಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಸುವರ್ಣವಿಧಾನಸೌಧ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಈ ಭಾಗದ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಇಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಬೇಕು ಎಂದು ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ,ಈ ವಿಚಾರದಲ್ಲಿ ಉತ್ತರ ಕರ್ನಾಟಕದ ಪಾಲುದಾರಿಕೆಯೂ ಇದೆ,ಹೀಗಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಬದಲಾಗಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವವರು ಬೆಳಗಾವಿಯ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ನಿರ್ಮಾಣ ಮಾಡಲಿ ಅನ್ನೋದು ಕರವೇ ಒತ್ತಾಯವಾಗಿದೆ.
ಪ್ರಮಾಣವಚನ ಕಾರ್ಯಕ್ರಮ ಬೆಳಗಾವಿಯ ಸುವರ್ಣವಿಧಾನಸೌಧದ ಎದುರು ನಡೆಸಿದ್ರೆ ಹೊಸ ಸರ್ಕಾರ ಉತ್ತರ ಕರ್ನಾಟಕಕ್ಕೆ ನ್ಯಾಯ ದೊರಕಿಸಿ ಕೊಟ್ಟಂತಾಗುತ್ತದೆ ಎಂದು ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ವಿಶಾಲವಾದ ಅಂಗಳವಿದೆ,ಇಲ್ಲಿ ಸುಮಾರು ಎರಡು ಲಕ್ಷ ಜನರನ್ನು ಸೇರಿಸಲು ಸೂಕ್ತ ಸ್ಥಳಾವಕಾಶವಿದೆ.ಕಂಠೀರವ ಕ್ರೀಡಾಂಗಣದಲ್ಲಿ ಕೋಟ್ಯಾಂತರ ರೂ ಖರ್ಚು ಮಾಡುವ ಬದಲು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಸುವಂತೆ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದು ಈ ವಿಚಾರವನ್ನು ಹೊಸ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲು ಉತ್ತರ ಕರ್ನಾಟಕದ ಶಾಸಕರು ಧ್ವನಿ ಎತ್ತಬೇಕೆಂದು ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮನವಿ ಮಾಡಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ