Latest

*ಸರ್ಕಾರ ರಚನೆಯ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕರ ನಿಯೋಗ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಸಿಎಲ್ ಪಿ ಸಭೆ ಬಳಿಕ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮೊದಲಾದ ನಾಯಕರನ್ನೊಳಗೊಂಡ ಕಾಂಗ್ರೆಸ್ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

Home add -Advt

ಮೇ 20ರಂದು ಮಧ್ಯಾಹ್ನ 12:30ಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದೇ ವೇಳೆ ಕೆಲ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.

https://pragati.taskdun.com/siddharamaiahd-k-shivakumarbangalorehal/


Related Articles

Back to top button