LatestUncategorized

*5 ಗ್ಯಾರಂಟಿ ಯೋಜನೆಗಳಿಗೆ ಸಚಿವ ಸಂಪುಟದಲ್ಲಿ ತಾತ್ವಿಕ ಒಪ್ಪಿಗೆ; ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬಂಪರ್ ಗಿಫ್ಟ್*

ಕರ್ನಾಟಕದ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಆರ್ಥಿಕತೆ ದಿವಾಳಿಯಾಗದ ರೀತಿಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ನೂತನ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಘೋಷಿಸಿದ 5 ಗ್ಯಾರಂಟಿಗಳಿಗೆ ಸಚಿವ ಸಂಪುಟದಲ್ಲಿ ತಾತ್ವಿಕ ಒಪ್ಪಿಗೆ ದೊರೆತಿದೆ. ಈ ಯೋಜನೆಗಳು ಕೇವಲ ಒಂದು ವರ್ಷದಲ್ಲಿ ಈಡೇರಿಸುವಂತದ್ದಲ್ಲ. ಆದಾಗ್ಯೂ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಗೃಹಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್ ವಿದ್ಯುತ್ ಉಚಿತ. ಇದರಿಂದ 1200 ಕೋಟಿ ತಿಂಗಳ ವೆಚ್ಚವಾಗಲಿದೆ. ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ತಿಂಗಳಿಗೆ 2000 ರೂಪಾಯಿ ವಿತರಣೆ. ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ 10 ಕೆಜಿ ಉಚಿತ ಅಕ್ಕಿ. ಸರ್ಕಾರಿ ಬಸ್ ನಲ್ಲಿ ಕರ್ನಾಟಕದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ- ಇದಕ್ಕಾಗಿ ವಿಶೇಷ ಬಸ್ ಪಾಸ್. ನಿರುದ್ಯೋಗಿ ಪದವೀಧರರಿಗೆ ಸರ್ಕಾರದಿಂದ ಭತ್ಯೆ, ಈ ವರ್ಷ ಉತ್ತೀರ್ಣರಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂಪಾಯಿ, ಡಿಪ್ಲೋಮ ಅಪದವೀಧರರಿಗೆ 1500 ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು. ಎಷ್ಟೇ ಕಷ್ಟವಾದರೂ ಕೊಟ್ಟ ಭರವಸೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

5 ಗ್ಯಾರಂಟಿ ಯೋಜನೆಗಳು:

  • ಗೃಹಲಕ್ಷ್ಮೀ – ಮನೆಯೊಡತಿಗೆ ತಿಂಗಳಿಗೆ 2000 ರೂಪಾಯಿ
  • ಗೃಹಜ್ಯೋತಿ – 200 ಯೂನಿಟ್ ವರೆಗೆ ಉಚಿತ ವಿದ್ಯುತ್
  • ಅನ್ನಭಾಗ್ಯ – ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ
  • ಯುವನಿಧಿ – ಪದವೀಧರರಿಗೆ ತಿಂಗಳಿಗೆ 3000 ರೂಪಾಯಿ
  • ಶಕ್ತಿ – ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ – ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯ
https://pragati.taskdun.com/d-k-shivakumarnamaskaravidhanasoudha-steps/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button