
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದೆ.
ದಸ್ತು ಬರಹಗಾರ ಪರಮೇಶ್ವರ್ ಬಂಧಿತ ದಸ್ತು ಬರಹಗಾರ. 13 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಮೇಶ್ವರ್ ನನ್ನು ಬಂಧಿಸಿದ್ದಾರೆ.
ಮನೆ ಖರೀದಿಸಲು ಸೇಲ್ ಡೀಡ್ ನೋಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಎಂಬುವವರ ಬಳಿ ಪರಮೇಶ್ವರ್ 20 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಮಂಜುನಾಥ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ 13 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ