ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ನೂತನ ಶಾಸಕರ ಪ್ರಮಾಣವಚನ, ಸ್ಪೀಕರ್ ಆಯ್ಕೆ ನಡೆಯಲಿದೆ.
ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆಯಲ್ಲಿ ಅಧಿವೇಶನ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾದರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ದೇವನಹಳ್ಳಿ ಶಾಸಕರಾದ ಕೆ.ಹೆಚ್.ಮುನಿಯಪ್ಪ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್, ಧಾರವಾಡ ಪಶ್ಚಿಮ ಕ್ಷೇತ್ರದ ಶಸಕರಾಗಿ ಅರವಿಂದ್ ಬೆಲ್ಲದ್, ಬಸವನಬಾಗೇವಾಡಿ ಶಾಸಕರಾಗಿ ಶಿವಾನಂದ್ ಪಾಟೀಲ್ ಸೇರಿದಂತೆ ಹಲವು ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ
ಅಧಿವೇಶನದ ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ