ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ವಿಚಾರವಾಗಿ, ಮಾತನಾಡಿದ ಡಿ.ಕೆ.ಶಿವಕುಮಾರ್, ಯಾರು ಏನೇಬೇಕಾದರೂ ಹೇಳಲಿ, ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಉನ್ನತ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಬೆಂಗಳೂರಿನಲ್ಲಿ ಮಂಗಳವಾರ ಸಮಾಲೋಚನೆ ನಡೆಸಿದರು. ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್, ಡಿಜಿಪಿ ಅಲೋಕ್ ಮೋಹನ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ