LatestUncategorized

*ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದಾರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಒಣಹವೆ , ತಾಪಮಾನ ಹೆಚ್ಚಳದಿಂದಾಗಿ ಬಸವಳಿದಿದ್ದಾರೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕುದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ.

Home add -Advt

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

https://pragati.taskdun.com/9-yearsboydeathheart-attackbangalore/


Related Articles

Back to top button