Kannada NewsUncategorized

ಬೆಳಗಾವಿ ಶಾಸಕರಿಂದ ಖರ್ಗೆಗೆ ಅಭಿನಂದನೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿತು.

ನವದೆಹಲಿಯ ಖರ್ಗೆ ನಿವಾಸಕ್ಕೆ ತೆರಳಿದ ಸಚಿವ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮಹೇಂದ್ರ ತಮಣ್ಣವರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಖರ್ಗೆ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು.

ಜೊತೆಗೆ, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮತ್ತಿತರ ವಿಷಯಗಳ ಕುರಿತು ಅವರೊಂದಿಗೆ ಚರ್ಚಿಸಿದರು.

https://pragati.taskdun.com/lakshmi-hebbalkar18-mlasministers/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button