LatestUncategorized

*ಇದು ಡಬಲ್ ಸ್ಟೇರಿಂಗ್ ಸರ್ಕಾರ; ಸಿಎಂ ಸೈಲೆಂಟ್; ಡಿಸಿಎಂ ವೈಲೆಂಟ್ ಆಗಿ ಧಮ್ಕಿ ಹಾಕಿದ್ದಾರೆ; ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಆರ್.ಅಶೋಕ್, ರಾಜ್ಯದಲ್ಲಿರುವುದು ಈಗ ಡಬಲ್ ಸ್ಟೇರಿಂಗ್ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಪ್ರತಿ ಸಭೆಯಲ್ಲಿಯೂ ಸಿಎಂಗಳಿಗಿಂತಲೂ ಡಿಸಿಎಂ ಮೊದಲು ಮಾತಾಡ್ತಾರೆ. ಈ ಸರ್ಕಾರದಲ್ಲಿ ಸಿಎಂ ಸೈಲೆಂಟ್. ಡಿಸಿಎಂ ವೈಲೆಂಟ್ ಆಗಿದ್ದಾರೆ. ಪೊಲೀಸರು, ಹಿಂದೂ ಸಂಘಟನೆಗಳಿಗೆ ಡಿಸಿಎಂ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಈವರೆಗೂ ಜಾರಿ ಮಾಡಿಲ್ಲ.ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಮೋಸ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂದು ಗ್ಯಾರಂಟಿ ಘೋಷಣೆ ಮಾಡಿದರು. ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ಗ್ಯಾರಂಟಿ ಕಾರ್ಡ್ ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಹಿ ಹಾಕಿ ಕೊಟ್ರು. ದಾರಿಯಲ್ಲಿ ಹೋಗುವವರಿಗೂ ಗ್ಯಾರಂಟಿ ಕಾರ್ಡ್ ಕೊಟ್ಟರು. ಆದರೆ ಈಗ ಕಾರಣಗಳನ್ನು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ ಎಂದು ಗುಡುಗಿದ್ದಾರೆ.

https://pragati.taskdun.com/businessmansuicidekuradharanadi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button