ಪ್ರಗತಿವಾಹಿನಿ ಸುದ್ದಿ; ರಾಮನಗರ: ವಿಧಾನಸಭಾ ಚುನಾವಣೆ ವೇಳೆ ಮತದಾರರ ಮನವೊಲಿಕೆಗೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕೂನಮುದ್ದನಹಳ್ಳಿಯಲ್ಲಿ ನಡೆದಿದೆ.
ಬಾಲಕಿ ಮಹಾಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾಳೆ. ಚುನಾವಣೆಯ ವೇಳೆ ನೀಡಿದ್ದ ಕುಕ್ಕರ್ ನಿಂದ ಮೊದಲ ಬಾರಿಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಕುಕ್ಕರ್ ಸಿಡಿದಿದ್ದು, ಬಾಲಕಿಯ ಮುಖ ಸೇರಿದಂತೆ ಹಲವೆಡೆ ಗಾಯಗಳಾಗಿವೆ.
ಗಾಯಾಳು ಬಾಲಕಿಯನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚುನಾವಣೆ ವೇಳೆ ಹಂಚುವ ಕುಕ್ಕರ್ ಗೆ ಮರುಳಾಗಬೇಡಿ ಎಂದು ಜನರಿಗೆ ವಿನಂತಿಸಿದ್ದೆ. ಈ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ