ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ.
ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಚ್ಚರವಹಿಸಿ, ಶಾಲೆಗಳು ಆರಂಭವಾಗುವ ಮೊದಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿದೆ.
ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯಗಳನ್ನು ಪರಿಶಿಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತರಬೇಕು. ಶಾಲಾ ಕೊಠಡಿಗಳ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಅಲ್ಲದೇ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಿಹಿ ಉಪಹಾರವನ್ನು ವಿತರಿಸಬೇಕು ಎಂದು ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ