ಪ್ರಗತಿವಾಹಿನಿ ಸುದ್ದಿ, ಇಂಫಾಲ: ಮಣಿಪುರ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾಜ್ಯದ ನಾನಾ ಭಾಗಗಳಲ್ಲಿ 8 ತಾಸುಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 40 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಈ ವಿಷಯವನ್ನು ಮಣಿಪುರ ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ. ರಾಜ್ಯದಲ್ಲಿ ಭಾನುವಾರ ನಡೆದಿದ್ದ ಗಲಭೆಯಲ್ಲಿ ಇಬ್ಬರು ಮೃತಪಟ್ಟು 12 ಜನ ಗಾಯಗೊಂಡಿದ್ದರು.
ಒಂದು ತಿಂಗಳಿಂದ ನಡೆಯುತ್ತಿರುವ ಈ ಜನಾಂಗೀಯ ಹಿಂಸಾಚಾರದಲ್ಲಿ 70ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಇಂಟರ್ ನೆಟ್ ಸಂಪರ್ಕ ಕಡಿತಗೊಳಿಸಲಾಗಿದ್ದು ಹಿಂಸಾಚಾರ ತಾರಕಕ್ಕೇರಿದ ಸ್ಥಳಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಣಿಪುರಕ್ಕೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಪರಿಶೀಲಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ