Latest

ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂ, ಡಿಸಿಎಂ ಗಳೊಂದಿಗೆ ಪ್ರಧಾನಿ ಮೋದಿ ಸಭೆ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.

“ಈ ಸಭೆಯಲ್ಲಿ ಅಭಿವೃದ್ಧಿಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದೆ” ಎಂದು ಮಾಹಿತಿ ನೀಡಿರುವ ನರೇಂದ್ರ ಮೋದಿ, “ಸಭೆ ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತದ ವಿಧಾನ ಮತ್ತು ಹಲವಾರು ಜನಪರ ಯೋಜನೆಗಳ ಅನುಷ್ಠಾನಗಳ ಬಗ್ಗೆ ವಿವರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಬಗ್ಗೆಯೂ ಚರ್ಚಿಸಲಾಗಿದೆ” ಎಂದು ತಿಳಿಸಿದ್ದಾರೆ.

Home add -Advt

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿಗಳಾದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಹರಿಯಾಣಾದ ಮನೋಹರ್ ಲಾಲ್ ಖಟ್ಟರ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ, ತ್ರಿಪುರಾದ ಮಾಣಿಕ್ ಸಹಾ ಹಾಗೂ ಅರುಣಾಚಲಪ್ರದೇಶದ ಪೆಮಾ ಖಂಡು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಯುಪಿ ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್ ಮೌರ್ಯ ಹಾಗೂ ಬ್ರಜೇಶ್​ ಪಾಠಕ್ ಮತ್ತಿತರರಿದ್ದರು.

https://pragati.taskdun.com/resurgence-of-violence-in-manipur-40-terrorists-killed-in-8-hours/
https://pragati.taskdun.com/implementation-of-guaranteed-schemes-as-promised-dcm-d-k-shivakumar/
https://pragati.taskdun.com/dcm-d-k-shivakumar-will-hold-a-series-of-meetings-today/

Related Articles

Back to top button