Kannada NewsKarnataka News
ಎಲ್ಲಾ ಶಾಲಾಭಿವೃದ್ಧಿ ಸಮಿತಿಗಳನ್ನು ಹೊಸದಾಗಿ ರಚಿಸಿ – ಸತೀಶ್ ಜಾರಕಿಹೊಳಿ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಲ್ಲಾ ಶಾಲಾಭಿವೃದ್ಧಿ ಸಮಿತಿ (SDMC) ಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವಂತೆ ಲೋಕೋಪಯೋಗಿ ಸಚಿವ ಸತೀಸ್ ಜಾರಕಿಹೊಳಿ ಆದೇಶಿಸಿದ್ದಾರೆ.
ಬೆಳಗಾವಿಯಲ್ಲಿ ಮಂಗಳವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಅವರು ಮಾತನಾಡುತ್ತಿದ್ದರು. ಸರಕಾರ ಬದಲಾಗಿದೆ. ಶಾಲಾಭಿವೃದ್ದಿ ಸಮಿತಿಗಳ ಕುರಿತು ಅನೇಕ ಕಡೆ ದೂರುಗಳಿವೆ. ಹಾಗಾಗಿ ಎಲ್ಲವನ್ನೂ ಹೊಸದಾಗಿ ರಚಿಸಿ ಎಂದು ಅವರು ಸೂಚಿಸಿದರು.
ಕೂಡಲೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.
ಅಂಗನವಾಡಿಗಳ ಕುರಿತು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಗತಿ ಕುರಿತು ಪ್ರತ್ಯೇಕ ಸಭೆ ನಡೆಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.




