
ಪ್ರಗತಿವಾಹಿನಿ ಸುದ್ದಿ, ಮಂಗಳೂರು: ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಹಾಥ್ (24) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಅವರು ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿ ಪುತ್ರಿಯಾದ ಅವರು ಉಜಿರೆಯ ಎಸ್ ಡಿಎಂ ಕಾಲೇಜಿನ ಮಾಜಿ ವಿದ್ಯಾರ್ಥಿನಿಯಾಗಿದ್ದರು. ಒಂದು ವರ್ಷದ ಹಿಂದೆ ವಿವಾಹವಾಗಿದ್ದು ಚಿಕ್ಕಮಗಳೂರಿನ ಪತಿಯ ಮನೆಯಲ್ಲಿದ್ದರು.
ಎದೆ ನೋವಿನ ಕಾರಣ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಶನಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದ ಅವರು ಹೈದರ್ ಪಡಂಗಡಿ ಅವರಲ್ಲಿ ವಾಲಿಬಾಲ್ ಆರಂಭಿಕ ತರಬೇತಿ ಪಡೆದಿದ್ದರು. ಮುಂಡಾಜೆಯಲ್ಲಿ ಪ್ರೌಢ ಶಿಕ್ಷಣ ಪಡೆಯುವಾಗ ದೈಹಿಕ ಶಿಕ್ಷಕ ಗುಣಪಾಲ ಎಂ.ಎಸ್. ಅವರಲ್ಲಿ ತರಬೇತಿ ಪಡೆದರು.
ವಾಲಿಬಾಲ್ ಕ್ರೀಡೆಯಲ್ಲಿ ಅಪ್ರತಿಮ ಸಾಧನೆ ತೋರಿದ್ದ ಅವರು ಲಕ್ನೋದಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಕರ್ನಾಟಕದ ಸಾಧನೆಯ ಬೆನ್ನೆಲುಬಾಗಿ ಆಡಿದ್ದರು.
ರಾಷ್ಟ್ರ ಮಟ್ಟದಲ್ಲಿ ಹಲವು ಚಿನ್ನ, ಬೆಳ್ಳಿ ಪದಕಗಳನ್ನು ಪಡೆದಿರುವ ಅವರ ಸಾವಿಗೆ ಹಲವು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
https://pragati.taskdun.com/lets-wait-for-the-conclusion-of-the-volume-basavaraja-bommai/
https://pragati.taskdun.com/implementation-of-all-five-guarantee-schemes-chief-minister-siddaramaiah/
https://pragati.taskdun.com/do-you-know-how-many-cases-were-registered-for-breaking-the-rules-on-world-tobacco-day/




