ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊಂಚ ನಿರಾಳವಾಗಿದ್ದಾರೆ.
ಸಿಬಿಐ ವಿಚಾರಣೆ ನಡೆಸುತ್ತಿರುವ ಈ ಪ್ರಕರಣದಲ್ಲಿ ತನಿಖೆಗೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಸಂಪೂರ್ಣ ಬಹುಮತ ಗಳಿಸಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ಪಟ್ಟು ಹಿಡಿದಿದ್ದರು. ಈ ಪ್ರಕರಣ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವಲ್ಲಿ ಕೊಂಚ ತೊಡಕನ್ನೂ ಉಂಟುಮಾಡಿತ್ತು. ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಅವರು ಡಿಸಿಎಂ ಸ್ಥಾನ ಒಪ್ಪಿಕೊಳ್ಳಬೇಕಾಗಿ ಬಂದಿತ್ತು.
ಆದರೆ ಇದೀಗ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ ಮಧ್ಯಂತರ ತಡೆಯಾಜ್ಞೆ ಅವಧಿ ವಿಸ್ತರಣೆ ಮಾಡಿರುವುದರಿಂದ ಡಿ.ಕೆ. ಶಿವಕುಮಾರ್ ಕೊಂಚ ನಿರಾಳವಾಗಿದ್ದಾರೆ.
https://pragati.taskdun.com/gold-and-silver-prices-decreased-today/
https://pragati.taskdun.com/honble-chief-minister-bommais-letter-to-siddaramaiah/
https://pragati.taskdun.com/horrible-accident-near-khanapur-bike-carrying-four-people-collided-with-a-bus/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ