Kannada NewsKarnataka News

ಜೂನ್ 5ರಂದು ಕೆಎಲ್ಇ ವಿವಿ ಘಟಿಕೋತ್ಸವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ), ಡೀಮ್ಡ್ ಟು ಬಿ ಯೂನಿವರ್ಸಿಟಿಯ 13ನೇ ಘಟಿಕೋತ್ಸವವು ಇದೇ ಸೋಮವಾರ, ದಿ. 5 ಜೂನ್ 2023 ರಂದು ಮಧ್ಯಾಹ್ನ 12.00 ಗಂಟೆಗೆ, ಜೆಎನ್‌ಎಂಸಿ ಆವರಣದಲ್ಲಿರುವ ಕೆಎಲ್‌ಇ ಶತಮಾನೋತ್ಸವ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದ್ದು,  ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಕಾಹೆರ ಕುಲಪತಿ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ‍್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಘಟಿಕೋತ್ಸವದಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣಗೊಂಡ ಅಭ್ಯರ್ಥಿಗಳು ಮತ್ತು ನಿಯಂತ್ರಕ ಮಂಡಳಿಗಳ ನಿಬಂಧನೆಗಳಿಗೆ ಅನುಗುಣವಾಗಿ ಇಂಟರ್ನ್ಶಿಪ್ ಸೇರಿದಂತೆ 27ನೇ ಮೇ 2023ಕ್ಕೆ ಅನುಗುಣವಾಗಿ ಆಯಾ ಪದವಿಗಳು ಮತ್ತು ಡಿಪ್ಲೋಮಾಗಳ ಪ್ರಮಾಣಪತ್ರ ಮಾನದಂಡಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ.
7 ಪಿಎಚ್‌ಡಿ, 9 ಪೋಸ್ಟ್ ಡಾಕ್ಟರಲ್ (ಡಿಎಂ/ಎಂಸಿಹೆಚ್) , 23 ಚಿನ್ನದ ಪದಕಗಳು ಸೇರಿದಂತೆ ಆರೋಗ್ಯ ವಿಜ್ಞಾನದ ವಿವಿಧ ವಿಭಾಗಗಳಲ್ಲಿ ಒಟ್ಟು 1451 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರಮಾಣ ಪತ್ರ ನೀಡಲಾಗುತ್ತಿದೆ. 445 ಸ್ನಾತಕೋತ್ತರ ಪದವಿ, 976 ಪದವಿ, 02 ಸ್ನಾತಕೋತ್ತರ ಡಿಪ್ಲೊಮಾ, 7 ಫೆಲೋಶಿಪ್ ಪ್ರಮಾಣ ಪತ್ರ ನೀಡಲಾಗುತ್ತದೆ.
ಘಟಿಕೋತ್ಸವದ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ www.kledeemeduniversity.edu.in ನೋಡಬಹುದು.

ಒಡಿಶಾ ರೈಲು ದುರಂತ; ಸಾವಿನ ಸಂಖ್ಯೆ 250; ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

https://pragati.taskdun.com/odisha-train-accident-minister-santosh-lad-assignment-for-the-protection-of-kannadigas/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button