ಹಳಿ ತಪ್ಪಿ ನಿಂತಿದ್ದ ರೈಲಿಗೆ ಯಶವಂತಪುರ ರೈಲು ಡಿಕ್ಕಿ: 50ಕ್ಕೂ ಹೆಚ್ಚು ಸಾವು, 350 ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ, ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಹಳಿ ತಪ್ಪಿ ನಿಂತಿದ್ದ ರೈಲಿಗೆ ಯಶವಂತಪುರದಿಂದ ಹೊರಟಿದ್ದ ರೈಲು ಡಿಕ್ಕಿಯಾಗಿ 50ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 350ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ ಹೌರಾದೆಡೆಗೆ ಸಾಗುತ್ತಿದ್ದ ಮತ್ತೊಂದು ರೈಲು ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್ – ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ.

ರೈಲಿನಲ್ಲಿ ನೂರಾರು ಜನರು ಸಿಲುಕಿಕೊಂಡಿದೆ. ಇನ್ನೂ ಹೆಚ್ಚಿನ ಸಂಖ್ಯೆ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ರೈಲು ಅಪಘಾತಕ್ಕೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button