ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆ ಆದೇಶ ಪ್ರಕಟ; 7 ಷರತ್ತುಗಳು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬಹುನಿರೀಕ್ಷಿತ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಆದೇಶ ಪ್ರಕಟವಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. ಒಟ್ಟೂ 7 ಷರತ್ತುಗಳನ್ನು ವಿಧಿಸಲಾಗಿದೆ.

ಅಂತ್ಯೋದಯ, ಬಿಪಿಎಲ್, ಹಾಗೂ ಎಪಿಎಲ್ ಗುರುತಿನ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಾಗಿರುವ ಮಹಿಳೆ ಈ ಯೋಜನೆಗೆ ಅರ್ಹಳಾಗಿರುತ್ತಾಳೆ.

ಆದರೆ, ಮಹಿಳೆ ಅಥವಾ ಅವಳ ಪತಿ ಆದಾಯ ತೆರಿಗೆ ಅಥವಾ ಜಿಎಸ್ ಟಿ ಪಾವತಿದಾರರಾಗಿದ್ದಲ್ಲಿ ಈ ಯೋಜನೆ ಅನ್ವಯವಾಗುವುದಿಲ್ಲ.

ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ.

ಆಧಾರ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗಿರಬೇಕು. ತಪ್ಪು ಮಾಹಿತಿ ನೀಡಿದಲ್ಲಿ ಪಾವತಿಯಾಗಿರವು ಹಣವನ್ನೂ ಮರಳಿ ವಸೂಲಿ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಆದೇಶದ ಪ್ರತಿ ಇಲ್ಲಿದೆ:

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

https://pragati.taskdun.com/dont-listen-to-such-rumors-the-government-is-with-you-minister-to-the-people-lakshmi-hebbalkar-abhay/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button