
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ.
ಲಾರಿಗೆ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಕನಕಮಣಿ (72), ಆಕಾಶ್ (17) ಹಾಗೂ ಆಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.
ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಂಬುಲೆನ್ಸ್ ಗುಜರಾತ್ ನ ಅಹಮದಾಬಾದ್ ನಿಂದ ತಮಿಳುನಾಡಿನ ತಿರುನೆಲ್ವೇಲಿಗೆ ತೆರಳುತ್ತಿತ್ತು. ಈ ವೇಳೆ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.
https://pragati.taskdun.com/kollapura144-sectionbelagavipolice-alert/