ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಚಂಡಮಾರುತವಾಗಿ ಮಾರ್ಪಟ್ಟಿದೆ. ಚಂಡಮಾರುತದ ಅಬ್ಬರ ಕ್ಷಣ ಕ್ಷಕ್ಕೂ ಹೆಚ್ಚುತ್ತಿದ್ದು, ರಾಜ್ಯದ ಕರಾವಳಿ ಭಾಗಕ್ಕೂ ಅಪ್ಪಳಿಸಲಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 11 ಹಾಗೂ 12ರಂದು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಪ್ರವಾಸಿಗರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳ, ಲಕ್ಷದ್ವೀಪ, ಗೋವಾ, ಮಹಾರಾಷ್ಟ್ರದಲ್ಲೂ ಭಾರಿ ಮಳೆಯಾಗಲಿದೆ. ಬಿಪರ್ ಜೋಯ್ ಚಂಡಮಾರುತದ ಅಬ್ಬರದಿಂದಾಗಿ ಅರಬ್ಬಿ ಸಮುದ್ರದಲ್ಲಿ ಗಂತೆಗೆ 115ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಮ್ತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ ಭಾಗಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.
https://pragati.taskdun.com/grihalakshmi-yojaneformrelease/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ