ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಪರ್ ಜೋಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಮೇಘಾಲಯ, ಅರುಣಾಚಲಪ್ರದೇಶಗಳಲ್ಲಿಯೂ ಭಾರಿ ಮಳೆಯಾಗಲಿದೆ.
ಮೂರರಿಂದ ನಾಲ್ಕುದಿನಗಳ ಕಾಲ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ಧಗೆಯಿಂದಾಗಿ ಜನರು ತತ್ತರಿಸಿದ್ದು, ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ನಡುವೆ ನಿನ್ನೆ ದಕ್ಷಿಣ ಕನ್ನಡ ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಿದ್ದು, ವರುಣದೇವ ಕೊಂಚ ತಂಪೆರೆದಿದ್ದಾನೆ. ಚಂಡಮಾರುತ ಹಿನ್ನೆಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಬಿರುಗಾಳಿ, ಮಳೆ ನಿರೀಕ್ಷೆಯಿದೆ.
https://pragati.taskdun.com/kuwjshivananda-tagadurhemanth-nimbalkarmeet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ