ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಯಾರೂ ಹಸಿವಿನಿಂದ ಮಲಗಬಾರದು ಎಂದು ಎಲ್ಲರಿಗೂ 10ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭೀಮ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆದಿದ್ದೇವೆ. ಎಲ್ಲರಿಗೂ 10 ಕೆಜಿ ಉಚಿತವಾಗಿ ಅಕ್ಕಿ ನೀಡುತ್ತಿದ್ದೇವೆ ಎಂದರು.
ಬಡ ಜನರಿಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಘೋಷಿಸಿದಂತೆಯೇ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಶೇ.85ರಷ್ಟು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ನೀಡುತ್ತಿದ್ದೇವೆ. ಐಎ ಎಸ್, ಐಪಿಎಸ್ ಅಧಿಕಾರಿಗಳಿಗೆ ಯಾಕೆ ಉಚಿತ ವಿದ್ಯುತ್ ನೀಡಬೇಕು. ಯಾರಿಗೆ ಅಗತ್ಯವಿದೆ ಅವರಿಗೆ ಮಾತ್ರ ಯೋಜನೆ ನೀಡಲಾಗುವುದು ಎಂದು ಹೇಳಿದರು.
ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ, ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದ್ದಾರೆ. ಬಡವರ- ಮಧ್ಯಮ ವರ್ಗದವರ ಕಲ್ಯಾಣಕ್ಕೆ ನಾವು ನೀಡಿರುವ ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕಾಗಿ ಸುಳ್ಳುಗಳನ್ನು ಹೊಸೆದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ನಾಡಿನ ಶೇ.85 ಕ್ಕೂ ಹೆಚ್ಚು ಜನರಿಗೆ ತಲುಪುತ್ತದೆ. ಉಳಿದವು ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುತ್ತದೆ ಎಂದು ತಿಳಿಸಿದರು.
https://pragati.taskdun.com/c-t-ravireactionvidhanasabha-electionbjp-lose/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ