ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಅರಬ್ಬಿ ಸಮುದ್ರದಲ್ಲಿ ಬಿಪರ್ ಜೋಯ್ ಚಂಡಮಾರುತದ ಅಬ್ಬರ ತೀವ್ರಗೊಂಡಿದ್ದು, ಉತ್ತರ ಈಶಾನ್ಯದತ್ತ ಚಂದಮಾರುತ ಬೀಸುತ್ತಿದೆ. ಮುಂದಿನ 4 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಕೇರಳದಲ್ಲಿ ಜೂನ್ 12ರವರೆಗೆ ಭಾರಿ ಮಳೆಯಾಗುವ ಸಂಭವವಿದೆ. ಲಕ್ಷದ್ವೀಪ, ಕೇರಳದಲ್ಲಿ ಬಿರುಗಾಳಿ ಸಹಿತ ಧಾರಕಾರ ಮಳೆಯಾಗಲಿದೆ. ಕೇರಳದ 8 ಜಿಲ್ಲೆಗಳಲ್ಲಿ ಮುನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟು, ಅಲಪ್ಪುರಂ, ಇಡುಕ್ಕಿ, ಕೊಟ್ಟಾಯಂ, ಕೊಯಿಕ್ಕೋಡ್, ಕಣ್ಣೂರಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಗುಜರಾತ್ ನ ಕರಾವಳಿ ಭಾಗದಲ್ಲಿಯೂ ಭಾರಿ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರವಾಸಿಗರು ಬೀಚ್ ಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
https://pragati.taskdun.com/free-busshaki-schemekarnataka-woman/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ