Latest

*ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿದಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ ಮುಂಭಾಗದ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆಯಲಿದೆ. ಎರಡು ಬಿಎಂಟಿಸಿ ಬಸ್ ಗಳು ಅಲಂಕೃತಗೊಂಡು ನಿಂತಿದ್ದು, ಎರಡು ಬಸ್ ಗಳಿಗೆ ಚಾಲನೆ ನೀಡುವ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದಾಗಿದೆ

Home add -Advt

ಇದೇ ವೇಳೆ ಆಯ್ದ ಮಹಿಳೆಯರಿಗೆ ಸಿಎಂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಿದ್ದಾರೆ. ಬಳಿಕ ಇದೇ ಬಸ್ ಮೂಲಕವಾಗಿ ಸಿಎಂ ಸಿದ್ದರಾಮಯ್ಯ ಮೆಜೆಸ್ಟಿಕ್ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಟರ್ಮಿನಲ್ ಗೆ 2ಕ್ಕೆ ಆಗಮಿಸಲಿದ್ದಾರೆ. ಮಹಿಳೆಯರಿಗೆ ಶೂನ್ಯ ದರ ಪಿಂಕ್ ಟಿಕೆಟ್ ವಿತರಣೆ ಮಾಡುವ ಮೂಲಕ ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

Related Articles

Back to top button