LatestUncategorized

*ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ ಏರಿಕೆ; 3 ತಿಂಗಳ ಮಗು ಸೇರಿ ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಚಿತ್ರದುರ್ಗದಲ್ಲಿ ಇಂದು ಮುಂಜಾನೆ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ವಿಜಯಪುರ ಗೊಲ್ಲರಹಟ್ಟಿ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಅಪಘಾತದಲ್ಲಿ ಕಾರಿನಲ್ಲಿದ್ದ ತಾಯಿ ತಬ್ಸೂಮ್ (28) ಹಾಗೂ ಸಂಬಂಧಿ ಜಾಕೀರ್ ಅಹ್ಮದ್ (60) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೂರು ತಿಂಗಳ ಮಗು ಫಾತಿಮಾ ಸೇರಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಐವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ. ಮೃತರು ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ನಿವಾಸಿಗಳು. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

Related Articles

Back to top button